ದಿನಾಂಕ 26-6 2022 ಆದಿತ್ಯವಾರದಂದು, ಬೆಳಿಗ್ಗೆ 10 ಗಂಟೆಗೆ. ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಮಲಾ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ.ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ, ಇವರ ಸಂಯುಕ್ತಾಶ್ರಯದಲ್ಲಿ “ನಶಾ ಮುಕ್ತ ಭಾರತ ಅಭಿಯಾನ”ದ ಪ್ರಾಯೋಜಕತ್ವದಲ್ಲಿ, 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ವಸತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿಯಲ್ಲಿ ನಡೆಯಿತು. ಈ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಕೂರ್ಮಾ ರಾವ್ ಎಂ.ಮಾನ್ಯ ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಮತ್ತು ಅವರ ಕುಟುಂಬದವರಿಗೆ ಈ ಶಿಬಿರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀಮತಿ ಶರ್ಮಿಳಾ ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮಾನ್ಯ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ. ಡಾ. ನಾಗಭೂಷಣ್ ಉಡುಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು. ಶ್ರೀಮತಿ ವೀಣಾ , ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ. ಶ್ರೀಮತಿ ರತ್ನಾ, ಉಪ ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಇವರೆಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಎ. ವಿ ಬಾಳಿಗಾ ಸಮೂಹ ಸಂಸ್ಥೆ ನಿರ್ದೇಶಕರು ಮತ್ತು ಮನೋವೈದ್ಯರಾದ ಡಾ. ಪಿ. ವಿ ಭಂಡಾರಿ ಅವರು ಕುಡಿತದ ಹಿಂತೆಗೆತದ ಚಿಹ್ನೆಗಳು ಮತ್ತು ಮಾನಸಿಕ ಸಮಸ್ಯೆಗಳು ಮತ್ತು ಅದರ ಚಿಕಿತ್ಸೆ ಮತ್ತು ಅನಾಮಿಕ ಅಮಲಿಗಳ ಸಭೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ನಶೆ ಮುಕ್ತ ಅಭಿಯಾನದ ಅಂಗವಾಗಿ ಯುವ ಜನತೆಯಲ್ಲಿ ಮದ್ಯ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸುವ ಕಿರು ಚಿತ್ರವನ್ನು ಮಾನ್ಯ ಜಿಲ್ಲಾಧಿಕಾರಿಗಳು ಶ್ರೀ ಕೂರ್ಮರಾವ್. ಎಂ ಅವರು ಬಿಡುಗಡೆಗೊಳಿಸಿದರು. ಕುಮಾರಿ ಚಂದ್ರಿಕಾ ಪ್ರಾರ್ಥಿಸಿದರು , ಡಾ.ಮಾನಸ್ ಇ.ರ್ ಸ್ವಾಗತಿಸಿದರು, ಡಾ.ವಿರೂಪಾಕ್ಷ ದೇವರಮನೆ ಅವರು ವಂದಿಸಿದರು, ಶ್ರೀಮತಿ ಸೌಜನ್ಯ ಶೆಟ್ಟಿ ಮತ್ತು ಶ್ರೀಮತಿ ಪದ್ಮ ರಾಘವೇಂದ್ರ ರವರು ನಿರೂಪಿಸಿದರು