Select Page

Date: September 11, 2024

ದಿನಾಂಕ 11-09-2024 ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ; ಡಾ. ಎ. ವಿ ಬಾಳಿಗ‌ ಸ್ಮಾರಕ ಆಸ್ಪತ್ರೆ, ಉಡುಪಿ; ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ; ಜಿಲ್ಲಾ ಆರೋಗ್ಯ ಕಚೇರಿ, ಉಡುಪಿ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆ, ಅಜ್ಜರಕಾಡು ಇವರ ಜಂಟಿ ಆಶ್ರಯದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಗಾರ ನಡೆಯಿತು.
ಈ ಕಾರ್ಯಗಾರದ ಧ್ಯೇಯ ವಾಕ್ಯ “ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸೋಣ”.
ಈ ಕಾರ್ಯಕ್ರಮವನ್ನು ಡಾ. ಲತಾ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ, ಉಡುಪಿ ಇವರು ಉದ್ಘಾಟಿಸಿ ಉದ್ಘಾಟನಾ ಭಾಷಣ ಮಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಆರ್. ವಿ. ಬಾಳಿಗಾ, ಟ್ರಸ್ಟಿ, ಡಾ. ಎ. ವಿ. ಬಾಳಿಗ ಚಾರಿಟೀಸ್ ಮತ್ತು ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಇವರು ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರು ಮತ್ತು ವೈದ್ಯಕೀಯ ನಿರ್ದೇಶಕರಾಗಿರುವ ಡಾ. ಪಿ. ವಿ. ಭಂಡಾರಿ ಹಾಗೂ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಡಾ. ವಾಸುದೇವ್, ಡಾ. ರಿತಿಕಾ, ಡಾ. ಮಾನಸ್ ಇ. ಆರ್ ಮತ್ತು ಡಾ. ದೀಪಕ್ ಮಲ್ಯ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಡಾ. ಎ. ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ ಮತ್ತು ಶ್ರೀಮತಿ ಅಮಿತಾ ಪೈ, ಒನ್ ಗುಡ್ ಸ್ಟೆಪ್ ನ ಸಂಸ್ಥಾಪಕರು ಉಪಸ್ಥಿತರಿದ್ದರು.
ಮೊದಲಿಗೆ ಕುಮಾರಿ ಸಿಂಚನ ಪ್ರಾಥಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿರುವಂತಹ ಅತಿಥಿ ಗಣ್ಯರನ್ನು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಆಗಿರುವ ಶ್ರೀಮತಿ ಪ್ರಮೀಳ ಸ್ವಾಗತಿಸಿದರು. ಕುಮಾರಿ ರಕ್ಷಿತಾ, ಆಪ್ತ ಸಮಾಲೋಚಕರು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಇವರು ನಿರೂಪಿಸಿದರು. ಶ್ರೀಮತಿ ಶೈಲಾ ಫೆರ್ನಾಂಡಿಸ್, ಎ. ಏನ್.ಎಸ್ ಇವರು ಧನ್ಯವಾದ ಸಮರ್ಪಿಸಿದರು.
ಈ ಕಾರ್ಯಕ್ರಮದಲ್ಲಿ ವಿಜಯಕುಮಾರ್ ಕಾಲೇಜ್ ಆಫ್ ನರ್ಸಿಂಗ್, ಗುಲ್ಬರ್ಗ; ಸರಕಾರಿ ನರ್ಸಿಂಗ್ ಕಾಲೇಜ್, ಕಾರ್ಕಳ ಮತ್ತು ಆದರ್ಶ ನರ್ಸಿಂಗ್ ಕಾಲೇಜು, ಉಡುಪಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.