Select Page

Date: January 13, 2025

Location: https://avbmhospital.org/event/teachers-training-programme/

ದಿನಾಂಕ 13-01-2025 ರ ಸೋಮವಾರದಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಮತ್ತು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಪ್ತಸಮಾಲೋಚನೆಯ ಕುರಿತು ಪ್ರೌಢಶಾಲಾ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಅಶೋಕ್ ಕಾಮತ್, ಉಪ ಪ್ರಾಂಶುಪಾಲರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ಗಣೇಶ್ ಕೃಷ್ಣ ಭಾಗವತ, ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಇವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕರಾದ ಡಾ. ಪಿ. ವಿ. ಭಂಡಾರಿಯವರು ವಹಿಸಿದ್ದರು.
ವೇದಿಕೆಯಲ್ಲಿ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಡಾ. ದೀಪಕ್ ಮಲ್ಯ ಹಾಗೂ ಆಸ್ಪತ್ರೆಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿಯವರು ಉಪಸ್ಥಿತರಿದ್ದರು.
ಆಸ್ಪತ್ರೆಯ ಪರಿಹಾರ ಬೋಧಕರಾದ ಶ್ರೀಮತಿ ಶ್ವೇತ ಅವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆಯವರು ಸರ್ವರನ್ನು ಸ್ವಾಗತಿಸಿದರು. ಆಪ್ತ ಸಮಾಲೋಚಕರಾದ ಶ್ರೀಮತಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಮಾಹಿತಿ ಕಾರ್ಯಗಾರ ನಡೆಯಿತು. ಮಾಹಿತಿ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕರಾದ ಡಾ. ಪಿ‌. ವಿ. ಭಂಡಾರಿ, ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಡಾ. ದೀಪಕ್ ಮಲ್ಯ ಹಾಗೂ ಆಸ್ಪತ್ರೆಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ, ಮನಶ್ಶಾಸ್ತ್ರಜ್ಞರಾದ ಶ್ರೀ ನಾಗರಾಜ್ ಮೂರ್ತಿ, ಆಪ್ತಸಮಾಲೋಚಕಾರದ ಶ್ರೀಮತಿ ಪದ್ಮ ರಾಘವೇಂದ್ರ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿಯ ಉಪಪ್ರಾಂಶುಪಾಲರಾದ
ಶ್ರೀ ಅಶೋಕ್ ಕಾಮತ್ ಇವರು ಹದಿಹರೆಯದ ಮಕ್ಕಳಲ್ಲಿ ಕಂಡುಬರುವ ವರ್ತನಾ ಸಮಸ್ಯೆಗಳು, ಭಾವನಾತ್ಮಕ ಸಮಸ್ಯೆಗಳು ಹಾಗೂ ಮದ್ಯವ್ಯಸನದ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿಗಳು ಹದಿಹರೆಯದ ಮಕ್ಕಳಲ್ಲಿ ಕಂಡುಬರುವ ವರ್ತನಾ ಸಮಸ್ಯೆಗಳ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು. ಉಡುಪಿ ಜಿಲ್ಲೆಯ ಪ್ರೌಡ ಶಾಲಾ ಶಿಕ್ಷಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.