Select Page

Date: September 3, 2024

ನಾಂಕ 3/092024 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ  ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಶತ ಸಂಭ್ರಮ ನಡೆಯಿತು. ಆಸ್ಪತ್ರೆಯ ರಿಸೆಪ್ಶನ್ ವಿಭಾಗದಲ್ಲಿ ಉಡುಪಿ ವಿಶ್ವನಾಥ ಶೆಣೈ , ಸ್ಥಾಪಕರು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರಿಂದ  ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಶ್ರೀಮತಿ ಪೂರ್ಣಿಮಾ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಡಾ. ಪಿ. ವಿ. ಭಂಡಾರಿ ವೈದ್ಯಕೀಯ ನಿರ್ದೇಶಕರು ಡಾ. ಎ. ವಿ. ಬಾಳಿಗಾ ಆಸ್ಪತ್ರೆ ಉಡುಪಿ ಇವರು ವಹಿಸಿದರು. ಡಾ. ಬಿ.  ಜನಾರ್ದನ್ ಭಟ ಹಿರಿಯ ಸಾಹಿತಿಗಳು ಬೆಳ್ಮಣ್ಣು, ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರ ಮಾಡಿದರು. ಶ್ರೀ ಮೋಹನ್ ಅಂದಾಡಿ ಸಹ ಕಾರ್ಯದರ್ಶಿ ಉಡುಪಿ ಜಿಲ್ಲಾ ಕ ಸಾ ಪ. ಗೌರವ ಉಪಸ್ಥಿತರಿದ್ದರು ಈ ಕಾರ್ಯಕ್ರಮದಲ್ಲಿ ಪ್ರೊಫೆಸರ್ ಶಂಕರ್ ಅಧ್ಯಕ್ಷರು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಸಂಸ್ಥೆಯ ಮನೋವೈದ್ಯರು ಹಾಗೂ ಲೇಖಕರಾಗಿರುವ ಡಾ. ವಿರುಪಾಕ್ಷ ದೇವರಮನೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುಸ್ತಕ ಪ್ರೇಮಿಗಳು ಸಾಹಿತಿಗಳು ರಂಗ ಕಲಾವಿದರು ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮನೆಯೇ ಗ್ರಂಥಾಲಯ ಅಭಿಯಾನದ ಸಂಚಾಲಕರಾದ ಶ್ರೀಯುತ ರಾಘವೇಂದ್ರ ಪ್ರಭು ಕರ್ವಾಲ್ ಅವರು  ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಶ್ರೀಮತಿ ಶ್ವೇತಾ, ಪರಿಹಾರ ಬೋಧಕರು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಅವರಿಂದ ಪ್ರಾರ್ಥನೆ ನಡೆಯಿತು.  ಶ್ರೀ ರವಿರಾಜ್ H.P ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು, ಇವರು ಎಲ್ಲರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಶ್ರೀಮತಿ ಸೌಮ್ಯ ಆಪ್ತ ಸಮಾಲೋಚಕರು ಡಾ ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ  ಇವರು ವಂದನಾರ್ಪಣೆ ಸಲ್ಲಿಸಿದರು.