ದಿನಾಂಕ 10-01-2025 ರ ಶುಕ್ರವಾರದಂದು ಬೆಳಿಗ್ಗೆ 10:00 ಗಂಟೆಗೆ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ; ಶ್ರೀ ಜನಾರ್ದನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಉಡುಪಿ; ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಮತ್ತು ರೋಟರಿ ಕ್ಲಬ್ ಉಡುಪಿ-ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ 33ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮಾರೋಪ ಸಮಾರಂಭವು ಕಮಲ್ ಎ ಬಾಳಿಗಾ ಸಭಾಗಂಣ ಇಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಶರತ್ಚಂದ್ರ ರಾವ್, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಹಾಗು ಕಾರ್ಯದರ್ಶಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಹಾಗೂ ರೊಟೇರಿಯನ್ ರಾಜವರ್ಮ ಅರಿಗ, ನಿರ್ದೇಶಕರು, ಸಮುದಾಯ ಸೇವೆಗಳು, ರೋಟರಿ ಕ್ಲಬ್ ಮಣಿಪಾಲ ಇವರು ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕರಾದ ಡಾ. ಪಿ. ವಿ. ಭಂಡಾರಿಯವರು ವಹಿಸಿದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಆಸ್ಪತ್ರೆಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಏರ್ಪಡಿಸಿದ್ದು, ಅದರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಆಸ್ಪತ್ರೆಯ ಆಪ್ತಸಮಾಲೋಚಕ ಶ್ರೀ ವಿಶ್ವೇಶ್ವರ ಹೆಗಡೆ ಕಾರ್ಯಕ್ರಮಕ್ಕೆ ಪ್ರಾರ್ಥಿಸಿದರು. ಆಸ್ಪತ್ರೆಯ ಮನೋವೈದ್ಯರಾದ ಡಾ. ಮಾನಸ್. ಇ. ಆರ್ ಇವರು ಸರ್ವರನ್ನು ಸ್ವಾಗತಿಸಿದರು. ಶಿಬಿರದ ಸಂಪೂರ್ಣ ವರದಿಯನ್ನು ಆಸ್ಪತ್ರೆಯ ಆಪ್ತಸಮಾಲೋಚಕಿ ಶ್ರೀಮತಿ ಪದ್ಮ ರಾಘವೇಂದ್ರ ವಾಚಿಸಿದರು ಮತ್ತು ಆಸ್ಪತ್ರೆಯ ಮನೋವೈದ್ಯರಾದ ಡಾ. ದೀಪಕ್ ಮಲ್ಯ ಧನ್ಯವಾದ ಸಮರ್ಪಣೆಯನ್ನು ಮಾಡಿದರು ಹಾಗೂ ಆಸ್ಪತ್ರೆಯ ಆಪ್ತಸಮಾಲೋಚಕಿ ಶ್ರೀಮತಿ ದೀಪಶ್ರೀ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಒಟ್ಟು 44 ಮಂದಿಗಳು ಈ 33ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಪ್ರಯೋಜನವನ್ನು ಪಡೆದರು.