ಕಮಲ್ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ,ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗೂ ಡಿಪಾರ್ಟ್ಮೆಂಟ್ ಆಫ್ ಕಮ್ಯುನಿಟಿ ಮೆಡಿಸಿನ್ ಕೆಎಂಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಮಹಿಳೆಯರಿಗೆ ಕ್ಯಾನ್ಸರ್ ಕುರಿತಾದ ಮಾಹಿತಿ ಕಾರ್ಯಗಾರ , ಮತ್ತು ಗರ್ಭಕಂಠದ ಹಾಗೂ ಸ್ತನ ಕ್ಯಾನ್ಸರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 04/05/2024 ರಂದು ಕಮಲ್ ಎ ಬಾಳಿಗ ಸಭಾಂಗಣದಲ್ಲಿ ನಡೆಯಿತು. ಡಾ. ರಾಜಲಕ್ಷ್ಮೀ ಸ್ತ್ರೀ ರೋಗ ತಜ್ಞರು ಹಾಗೂ ಅಧ್ಯಕ್ಷರು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವರು ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು .
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ ಅರ್ಚನಾ ಭಕ್ತ ಕಾರ್ಯದರ್ಶಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಡಾ ಇಂದಿರಾ ಶಾನಭಾಗ್ ಅಧ್ಯಕ್ಷರು ಮಹಿಳಾ ವೈದ್ಯರ ಸಂಘ ಉಡುಪಿ ಹಾಗೂ ಆಡಳಿತ ಅಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ ಪಿ ವಿ ಭಂಡಾರಿ ಮನೋವೈದ್ಯರು, ವೈದ್ಯಕೀಯ ನಿರ್ದೇಶಕರು ಡಾ ಎ ವಿ ಬಾಳಿಗ ಸಮೂಹ ಸಂಸ್ಥೆಗಳು ಉಡುಪಿ ಇವರು ವಹಿಸಿದ್ದರು. ಶ್ರೀಮತಿ ಸೌಜನ್ಯ ಶೆಟ್ಟಿಯವರು ಸರ್ವರನ್ನು ಸ್ವಾಗತಿಸಿದರು. ಶ್ರೀಮತಿ ಪೂರ್ಣಿಮ ಎಸ್ ವೃತ್ತಿಪರ ಚಿಕಿತ್ಸಕರು ಪ್ರಾರ್ಥಿಸಿದರು. ಧನ್ಯವಾದ ಸಮರ್ಪಣೆ ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಪದ್ಮ ರಾಘವೇಂದ್ರ ಆಪ್ತ ಸಮಾಲೋಚಕರು ಡಾಕ್ಟರ್ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರು ನೆರವೇರಿಸಿದರು .
ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗೆ ಡಾ. ರಾಜಲಕ್ಷ್ಮಿ ಸ್ತ್ರೀರೋಗ ತಜ್ಞರು ಹಾಗೂ ಡಾ ಇಂದಿರಾ ಶಾನ್ ಭಾಗ್ಇವರಿಂದ
ಗರ್ಭಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ಕುರಿತಾದ ಮಾಹಿತಿ ಕಾರ್ಯಗಾರವು ನಡೆಯಿತು ಈ ಮಾಹಿತಿ ಕಾರ್ಯಗಾರದಲ್ಲಿ ಡಾ. ಎ ವಿ ಬಾಳಿಗ ಸಮೂಹ ಸಂಸ್ಥೆಯ ಎಲ್ಲಾ ಮಹಿಳಾ ಸಿಬ್ಬಂದಿಗಳು, ಬಂಧು ಡೇ ಕೇರ್ ಮತ್ತು ಅಭಯ ಪುನರ್ವಸತಿ ಕೇಂದ್ರದ ಮಹಿಳೆಯರು
ಉಪಸ್ಥಿತರಿದ್ದರು ಮಾಹಿತಿ ಕಾರ್ಯಾಗಾರದ ನಂತರ ಮಹಿಳೆಯರಿಗೆ ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದ ಪ್ರಯೋಜನವನ್ನು 35ಕ್ಕಿಂತಲೂ ಹೆಚ್ಚು ಮಂದಿ ಪಡೆದುಕೊಂಡರು.