RECENT EVENTS

ದಿನಾಂಕ 30.11.2021 ರಂದು ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡಣ್ಣಗುಡ್ಡೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಬೆಳ್ಮಣ್ ಸಂಚುರಿ ವತಿಯಿಂದ ಸಂತ ಜೋನ್ ರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಳ್ಮಣ್ ನಲ್ಲಿ ಹದಿಯರೆದ ಸಮಸ್ಯೆಗಳು ಮಾದಕ ಹಾಗೂ ಮದ್ಯ ವ್ಯಸನ, ಮೊಬೈಲ್ ಬಳಕೆಯ ದುರುಪಯೋಗ ಈ ವಿಚಾರದ ಬಗ್ಗೆ ಜಾಗೃತಿಯ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು ಡಾ.ಎ.ವಿ..ಬಾಳಿಗ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿಣಿ ಶ್ರೀಮತಿ ಸೌಜನ್ಯ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದವರು. ಸಂಚುರಿ ಬೆಳ್ಮಣ್ ಇದರ ಅಧ್ಯಕ್ಷರಾದ ಶ್ರೀಮತಿ […]

ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ 29ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆಯಲ್ಲಿ ಹೊಸ ವರ್ಷದ ದಿನದಂದು 29ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ಉದ್ಘಾಟನೆಗೊಂಡಿತು. ಭಾರತೀಯ ಮನೋವೈದ್ಯಕೀಯ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಕಿರಣ್ ಕುಮಾರ್ ಪಿ.ಕೆ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 29ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಎಂದು ಕೇಳಿ ನಾನು ಆಶ್ಚರ್ಯ ಪಟ್ಟೆ. ಮದ್ಯವ್ಯಸನ ವಿಮುಕ್ತಿ ಶಿಬಿರ ನಡೆಸುವುದು ಅಷ್ಟು ಸುಲಭದ ಮಾತಲ್ಲ. ಸಾವಿರದ […]

ವಿಶ್ವ ಆಟಿಸಂ ಜಾಗೃತಿ ದಿನಾಚರಣೆಯ ಪ್ರಯುಕ್ತ ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ,ಆಟಿಸಂ ಸೊಸೈಟಿ ಉಡುಪಿ ಮತ್ತು ರೋಟರಿ ಕ್ಲಬ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ,ಆಟಿಸಂ ಅರಿವಿನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳನ್ನು ಡಾ.ಪ್ರಿಯದರ್ಶಿನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ವೀಣಾ ವಿವೇಕಾನಂದರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸರ್ಕಾರ,ಜನಪ್ರತಿನಿಧಿಗಳು,ಸಂಬಂಧಪಟ್ಟ ಸಂಘ ಸಂಸ್ಥೆಗಳು ಹಾಗೂ ಅದರ ಜೊತೆಗೆ ಪೋಷಕರು ಸೇರಿ ಪ್ರಯತ್ನಿಸಿದರೆ ಆಟಿಸಂ ಇರುವಂತಹ […]

ರೆಟಿನಾ ಕ್ಲಿಕನ್ ಉದ್ಟಾಟನೆ ಮತ್ತು ಅಭಯ ಪುನರ್ವಸತಿ ಕೇಂದ್ರದ ವಾರ್ಷಿಕೋತ್ಸವ ದಿನಾಂಕ ೨೬ ೦೪.೨೦೨೨ ರೆಟಿನಾ ಕ್ಲಿನಿಕ್ ನ ಉದ್ಘಾಟನೆ ಹಾಗೂ ಅಭಯ ಪುನರ್ವಸತಿ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವನ್ನು ಡಾ. ಎ.ವಿ.ಬಾಳಿಗಾರವ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಯಿತು. ಕಮಲ್ ಎ ಬಾಳಿಗ ಮೆಡಿಕಲ್ ಸೆಂಟರ್ ನಲ್ಲಿ ರೆಟಿನಾ ಕ್ಲಿನಿಕ್ ನ ಉದ್ಘಾಟನೆಯನ್ನು ಶ್ರೀ. ಕೌಶಲ್ ವೋರ್, ವ್ಯವಸ್ಥಪಾಕ ನಿರ್ದೇಶಕರು, ಮೇಸಲಿ ಇಂಡಿಯಾ ಪ್ಯಾಕೇಜಿಂಗ್ ಪ್ರೆ.ಲಿ.ಉಡುಪಿ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ. ಎ.ವಿ.ಬಾಳಿಗಾ ಹಾಗೂ ಕಮಲ್ ಎ. ಬಾಳಿಗಾರವರ […]

ದಿನಾಂಕ 24/5/2022 ರಂದು ಜಿಲ್ಲಾ ಪಂಚಾಯತ್ ಉಡುಪಿ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ , ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ. ಇವರ ಜಂಟಿ ಆಶ್ರಯದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ 2022 “ಭರವಸೆಯೊಂದಿಗೆ ಸಂಪರ್ಕ ” ಎಂಬ ಘೋಷವಾಕ್ಯ ಮೂಲಕ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಯಿತು ಕಾರ್ಯಕ್ರಮದ ಉದ್ಘಾಟಕರಾದ ಡಾ. ನಾಗಭೂಷಣ್ ಉಡುಪ , ಜಿಲ್ಲಾ […]

ವಿಶ್ವ ತಂಬಾಕು ರಹಿತ ದಿನ – ( ತಂಬಾಕಿನಿಂದ ಪರಿಸರವನ್ನು ರಕ್ಷಿಸಿ) ದಿನಾಂಕ 31.05.2022 ರಂದು ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇಲ್ಲಿ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಜಿಲ್ಲೆ, ಕಮಲ್ ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ , ರೋಟರಿ ಕ್ಲಬ್ –ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು “ತಂಬಾಕಿನಿಂದ ಪರಿಸರವನ್ನು ರಕ್ಷಿಸಿ* ಘೋಷವಾಕ್ಯದೊಂದಿಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ಶರ್ಮಿಳಾ ಎಸ್. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು […]

ವಿಶ್ವ ಯೋಗ ದಿನ 21-06-2022 ಇದರ ಅಂಗವಾಗಿ ನಮ್ಮ ಸಂಸ್ಥೆಯ ವತಿಯಿಂದ ಆಸನ ಫೋಟೋ ಸ್ಪರ್ಧೆಯನ್ನು ಹಿರಿಯ ಮತ್ತು ಕಿರಿಯರ ವಿಭಾಗದಲ್ಲಿ ಆಯೋಜಿಸಲಾಗಿತ್ತು. ಸುಮಾರು 50ಕ್ಕಿಂತ ಹೆಚ್ಚು ಸ್ಪರ್ಧಿಗಳು ಹಾಗೂ 100 ಕ್ಕೂ ಹೆಚ್ಚು ಫೋಟೋಗಳನ್ನು ಸ್ಪರ್ದಿಗಳು ಕಳುಹಿಸಿದ್ದರು. ತಜ್ಞರ ಸಲಹೆಯಮೆರೆಗೆ ಸೂಕ್ತ ಬಹುಮಾನವನ್ನು ವಿತರಿಸಲಾಯಿತು. ಯೋಗ ದಿನಾಚರಣೆಯ ಪ್ರಯುಕ್ತವಾಗಿ ಡಾ. ಎ. ವಿ. ಬಾಳಿಗಾ ಸಂಸ್ಥೆಯ ಅಂಗ ಸಂಸ್ಥೆಯಾದ ಅಭಯ ಪುನರ್ವಸತಿ ಕೇಂದ್ರ ಹಾಗೂ ಆಶ್ರಯ ಹಿರಿಯ ನಾಗರಿಕರ ಫಲನುಭವಿಗಳ ಸಮ್ಮುಖದಲ್ಲಿ ಕಾರ್ಯವನ್ನು ಆಯೋಜಿಸಲಾಗಿತ್ತು. ಮುಖ್ಯ […]

ದಿನಾಂಕ 26-6 2022 ಆದಿತ್ಯವಾರದಂದು, ಬೆಳಿಗ್ಗೆ 10 ಗಂಟೆಗೆ. ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಮಲಾ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ.ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ, ಇವರ ಸಂಯುಕ್ತಾಶ್ರಯದಲ್ಲಿ “ನಶಾ ಮುಕ್ತ ಭಾರತ ಅಭಿಯಾನ”ದ ಪ್ರಾಯೋಜಕತ್ವದಲ್ಲಿ, 30ನೇ ಉಚಿತ ಮದ್ಯವ್ಯಸನ ವಿಮುಕ್ತಿ […]

ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ಡಾ ಎ. ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಾರಾಡಿಯ ಸಮುದಾಯ ಭವನದಲ್ಲಿ ನಡೆಯಿತು. ವಿಷಯ:-ಮಾದಕ ವಸ್ತುಗಳಿಂದಾಗುವ ಆರೋಗ್ಯ ಮತ್ತು ಮಾನವೀಯ ಬಿಕ್ಕಟ್ಟುಗಳ ಸವಾಲುಗಳನ್ನು ಪರಿಹರಿಸುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ನಾಗಭೂಷಣ ಉಡುಪ ಎಚ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]

ಜಿಲ್ಲಾಡಳಿತ ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಉಡುಪಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಕಮಲ್.ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾಮುಕ್ತ ಭಾರತ ಅಭಿಮಾನದ ಪ್ರಾಯೋಜಕತ್ವದಲ್ಲಿ 30 ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮರೋಪ ಸಮಾರಂಭವು ಡಾ.ಎ.ವಿ ಬಾಳಿಗ ಆಸ್ಪತ್ರೆಯ […]